ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಕಾಶ್ಮೀರ ರಾಜ್ಯದ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿದ್ದ ಮೆಹಬೂಬಾ ಮುಫ್ತಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ, ಶ್ರೀನಗರದ ಖಿಂಬರ್ ಪ್ರದೇಶದಲ್ಲಿ ತಮ್ಮ ಮನೆಯಲ್ಲಿ "ಗೃಹಬಂಧನದಲ್ಲಿ"ಇರುವುದಾಗಿ ಹೇಳಿಕೊಂಡಿದ್ದಾರೆ. ಅವರು ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್‌ನ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಜತೆಗೂಡಿ ಪಕ್ಷದ ಕಚೇರಿಗೆ ತೆರಳಬೇಕಾಗಿತ್ತು.
" ಹುತಾತ್ಮರ ಸ್ಮರಣೆಗಾಗಿ ಸ್ಮಶಾನಕ್ಕೆ ಭೇಟಿ ನೀಡಲು ಬಯಸಿದ್ದಕ್ಕಾಗಿ ನಾನು ಗೃಹಬಂಧನದಲ್ಲಿದ್ದೇನೆ. ಕಾಶ್ಮೀರದಲ್ಲಿ ಪರಿಸ್ಥಿತಿ ಸಾಮಾನ್ಯಕ್ಕಿಂತ ವಿಭಿನ್ನವಾಗಿರುವ ಕಾರಣ ನನ್ನನ್ನು ಇಂದು ಗೃಹಬಂಧನದಲ್ಲಿ ಇರಿಸಲಾಗಿದೆ. ಇದು ಸಾಮಾನ್ಯ ಸ್ಥಿತಿಯ ಅವರ ನಕಲಿ ಹಕ್ಕುಗಳನ್ನು ಬಹಿರಂಗಪಡಿಸುತ್ತಿದೆ ಎಂದು ಮೆಹಬೂಬಾ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಜಮ್ಮು ಮತ್ತು ಕಾಶ್ಮೀರ: ಗಡಿ ನಿಯಂತ್ರಣ ರೇಖೆ ದಾಟುತ್ತಿದ್ದ ಶಂಕಿತ ಮಹಿಳೆಯನ್ನು ಗುಂಡಿಕ್ಕಿ ಕೊಂದ ಭದ್ರತಾ ಪಡೆ
ಬಿಜೆಪಿಯ ಹೀರೋಗಳಾದ ಸಾರ್ವರ್ಕರ್, ಶ್ಯಾಮ ಪ್ರಸಾದ್ ಮುಖರ್ಜಿ, ಮಾಧವ್ ಸದಾಶಿವರಾವ್ ಗೋಳ್ವಾಲ್ಕರ್ ಮತ್ತು ನಾಥೂರಾಮ್ ಗೋಡ್ಸೆ ಸಿದ್ದಾಂತಗಳ ಮೂಲಕ, ಬಲವಂತವಾಗಿ ನಮ್ಮ ಮೇಲೆ ದ್ವೇಷ ಮತ್ತು ಒಡಕು ಹರಡುವುದನ್ನು ಬಲವಂತವಾಗಿ ಹೇರಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಜಮ್ಮು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವನ್ನು ಸ್ಥಾಪಿಸಲು, ಅದಕ್ಕಾಗಿ ಪ್ರಾಣ ತ್ಯಾಗ ಮಾಡಿದವರನ್ನು ಈ ಸಂದರ್ಭದಲ್ಲಿ ನಾನು ಸದಾ ನೆನಪಿಸಿಕೊಳ್ಳುತ್ತೇನೆ. ರಾಜ್ಯದ ಏಳಿಗೆಗಾಗಿ ಹೋರಾಡಿ ಹುತಾತ್ಮರಾದವರು ಯಾವಾಗಲೂ ಜನರ ಮನಸಿನಲ್ಲಿರುತ್ತಾರೆ ಎಂದು ಮೆಹಬೂಬಾ ಮುಪ್ತಿ ಸ್ಮರಿಸಿಕೊಂಡಿದ್ದಾರೆ.