ಚಿತ್ತೋರ್‌ಗಢ(ರಾಜಸ್ಥಾನ): ಮೇವಾರ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ಕಾಶ್ಮೀರಿ ವಿದ್ಯಾರ್ಥಿನಿಯೊಬ್ಬಳು ಶನಿವಾರ ವಿಶ್ವವಿದ್ಯಾಲಯದ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದನ್ನು ಇನ್ನೂ ತಿಳಿದು ಬಂದಿಲ್ಲ. ಪೊಲೀಸರು ಕಾರಣ ಪತ್ತೆ ಹಚ್ಚುವ ಪ್ರಯತ್ನದಲ್ಲಿದ್ದಾರೆ. ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯ ಗಂಗ್ರಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ. ಗಂಗ್ರಾರ್ ಎಸ್‌ಎಚ್‌ಒ ಶಿವಲಾಲ್ ಮೀನಾ ಮಾತನಾಡಿ, ಮೃತ ವಿದ್ಯಾರ್ಥಿನಿಯು ಕಾಶ್ಮೀರದ ವಾಣಿಪುರ ಜಿಲ್ಲೆಯವರಾಗಿದ್ದು, ರೇಡಿಯಾಲಜಿ ವಿಭಾಗದ ಎರಡನೇ ವರ್ಷದ ವಿದ್ಯಾರ್ಥಿಯಾಗಿದ್ದರು. ಶನಿವಾರ ಮುಂಜಾನೆ 4.45ಕ್ಕೆ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.