ಶ್ರೀನಗರ(ಜಮ್ಮು-ಕಾಶ್ಮೀರ): ಜಮ್ಮು - ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಪರಿಣಾಮ ಖ್ಯಾತ ಕಾಶ್ಮೀರ ಪಂಡಿತ್ ಉದ್ಯಮಿ ಮಖನ್ ಲಾಲ್ ಬಿಂದ್ರೂ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ.
ಉದ್ಯಮಿ ಮಖನ್ ಔಷಧಾಲಯದಲ್ಲಿ ಕೆಲಸ ಮಾಡ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಆತ ಸಾವನ್ನಪ್ಪಿದ್ದಾನೆ. ಮತ್ತೊಂದು ದಾಳಿಯಲ್ಲಿ ಬೀದಿ ಬದಿ ವ್ಯಾಪಾರಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಶ್ರೀನಗರದ ಹೊರವಲಯದ ಹವಾಲ್ ಮದಿನ್ ಸಾಹಿಬ್ ಬಳಿ ಈ ಘಟನೆ ನಡೆದಿದೆ ಎಂಧು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.