ನವದೆಹಲಿ:ಕಾಶ್ಮೀರ ಪ್ರತ್ಯೇಕತಾವಾದಕ್ಕಾಗಿ ಹೋರಾಡಿ ಜೈಲು ಶಿಕ್ಷೆಗೆ ಒಳಗಾಗಿದ್ದ ನಾಯಕ, ಸೈಯದ್ ಅಲಿ ಶಾ ಗಿಲಾನಿ ಅವರ ಅಳಿಯ ಅಲ್ತಾಫ್ ಶಾ ಕ್ಯಾನ್ಸರ್ ರೋಗದಿಂದ ಬಳಲಿ ಇಂದು ನಿಧನರಾಗಿದ್ದಾರೆ.
ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಅಲ್ಪಾಫ್ ಶಾ ಕೈದಿಯಾಗಿಯೇ ಕೊನೆಯುಸಿರೆಳೆದಿದ್ದಾರೆ. ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅಲ್ತಾಫ್ ಶಾರನ್ನು ಕೆಲ ದಿನಗಳ ಹಿಂದೆ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಕ್ಯಾನ್ಸರ್ ರೋಗ ಉಲ್ಬಣಗೊಂಡಿದ್ದ ಕಾರಣ ಅಸುನೀಗಿದ್ದಾರೆ.