ಢಾಕಾ:ಬಾಂಗ್ಲಾದೇಶದಲ್ಲಿ 3ನೇ ವರ್ಷದ ಎಂಬಿಬಿಎಸ್ ಓದುತ್ತಿದ್ದ ಜಮ್ಮು ಕಾಶ್ಮೀರದ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.
ಕಾಶ್ಮೀರದ ಅನಂತ್ನಾಗ್ ನಿವಾಸಿಯಾಗಿದ್ದ ವಿದ್ಯಾರ್ಥಿನಿ ಖುಷ್ಬೂ ಮಂಜೂರ್ ಮೃತಪಟ್ಟವರು. ಬಾಂಗ್ಲಾದೇಶದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು. ಬುಧವಾರ ಮಧ್ಯಾಹ್ನ ಆಕೆ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.