ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಆಮ್ ಆದ್ಮಿ ಪಕ್ಷ ದೇಶಾದ್ಯಂತ ಮುಂಬರುವ ಚುನಾವಣೆಗೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದೆ. ಅದರಲ್ಲೂ ಪ್ರಮುಖವಾಗಿ ಗುಜರಾತ್ಗೆ ಕಾಲಿಡಲು ಹೆಚ್ಚಿನ ಪ್ರಯತ್ನಗಳು ನಡೆಯುತ್ತಿವೆ. ಕಳೆದ ಬಾರಿ ಗುಜರಾತ್‌ನ ಪಾಲಿಕೆ ಚುನಾವಣೆಯಲ್ಲಿ ಪಕ್ಷವು ಉತ್ತಮ ಸಾಧನೆ ಮಾಡಿತ್ತು ಮತ್ತು ಹಲವಾರು ಸ್ಥಾನಗಳನ್ನು ಗೆದ್ದಿತ್ತು.
ಈ ಬಾರಿ ರಾಮ ನವಮಿಯ ಶುಭಾಶಯ ತಿಳಿಸಿದ ನಂತರ ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, ಗುಜರಾತಿನ ಶಿಥಿಲಾವಸ್ಥೆಯಲ್ಲಿರುವ ಶಿಕ್ಷಣದ ಬಗ್ಗೆ ಜನ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಗುಜರಾತ್‌ನಲ್ಲಿ ಉತ್ತಮ ಶಿಕ್ಷಣಕ್ಕಾಗಿ ಧ್ವನಿ ಏರಲಾರಂಭಿಸಿದೆ. ಬಿಜೆಪಿ 27 ವರ್ಷಗಳಲ್ಲಿ ಉತ್ತಮ ಶಿಕ್ಷಣ ನೀಡಲು ಸಾಧ್ಯವಾಗಲಿಲ್ಲ. ಎಎಪಿ ಸರ್ಕಾರವು ಗುಜರಾತ್‌ನ ಜನರನ್ನು ಮತ್ತು ಎಲ್ಲಾ ಪಕ್ಷಗಳನ್ನು ಕರೆದೊಯ್ಯುವ ಮೂಲಕ ಗುಜರಾತ್‌ನಲ್ಲಿ ಮತ್ತು ದೆಹಲಿಯಲ್ಲಿ ಉತ್ತಮ ಶಿಕ್ಷಣವನ್ನು ನೀಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.