ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 'ಮೇಕ್ ಇಂಡಿಯಾ ನಂಬರ್ 1' ಮಿಷನ್ಗೆ ಚಾಲನೆ ನೀಡಿದ್ದಾರೆ. ಈ ಮಿಷನ್ ಮೂಲಕ ಭಾರತವನ್ನು ವಿಶ್ವದ ನಂಬರ್ ಒನ್ ದೇಶವನ್ನಾಗಿ ಮಾಡುವ ಗುರಿ ಹೊಂದಿದ್ದು, ಅದಕ್ಕೆ ನಾಗರಿಕರು ಹಾಗೂ ರಾಜಕೀಯ ಪಕ್ಷಗಳು ಕೈಜೋಡಿಸುವಂತೆ ಮನವಿ ಮಾಡಿದ್ದಾರೆ. ಈ ಮಿಷನ್ನಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಇತರೆ ರಾಜಕೀಯ ಪಕ್ಷಗಳು ಭಾಗಿಯಾಗಲು ನಾನು ಕರೆ ನೀಡುತ್ತೇನೆ ಎಂದು ಕೇಜ್ರಿವಾಲ್ ತಿಳಿಸಿದರು.
ಈ ಮಿಷನ್ನಲ್ಲಿ ಉಚಿತ ಶಿಕ್ಷಣ, ಆರೋಗ್ಯ ಸೇವೆ, ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಸಮಾನ ಹಕ್ಕು, ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನೀಡುವುದು ಮುಖ್ಯ ಉದ್ದೇಶವಾಗಿದೆ. ದೆಹಲಿಯಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿರುವ ಕೇಜ್ರಿವಾಲ್, ಮಹಿಳೆಯರಿಗೆ ಸಮಾನ ಹಕ್ಕು, ಘನತೆ ಮತ್ತು ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗುವಂತೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.