ಮೊಗಾ(ಪಂಜಾಬ್):ಎರಡು ದಿನಗಳ ಪಂಜಾಬ್ ಪ್ರವಾಸದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Delhi CM Arvind Kejriwal) ಮೊಗಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ(AAP Govt) ಸರ್ಕಾರ ರಚನೆ ಮಾಡಿದ್ರೆ 18+ ಎಲ್ಲ ಯುವತಿಯರಿಗೂ ಪ್ರತಿ ತಿಂಗಳು 1 ಸಾವಿರ ರೂ. ಸಹಾಯಧನ ನೀಡುವುದಾಗಿ ಹೇಳಿದ್ದಾರೆ.
ಪಂಜಾಬ್ನಲ್ಲಿ 2022ರ ಆರಂಭದಲ್ಲಿ ವಿಧಾನಸಭೆ ಚುನಾವಣೆ(punjab assembly election) ನಡೆಯಲಿದ್ದು, ಅದನ್ನ ಗಮನದಲ್ಲಿಟ್ಟುಕೊಂಡು ಕೇಜ್ರಿವಾಲ್ ಈ ಮಹತ್ವದ ಘೋಷಣೆ ಮಾಡಿದ್ದಾರೆ. ಪಂಜಾಬ್ ಚುನಾವಣೆಗೋಸ್ಕರ ಈಗಾಗಲೇ 10 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿರುವ ಕೇಜ್ರಿವಾಲ್, ಪಂಜಾಬ್ನಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಕನಸು ಕಾಣುತ್ತಿದ್ದಾರೆ. ಈ ಹಿಂದೆ ಕೂಡ ಇಲ್ಲಿಗೆ ಭೇಟಿ ನೀಡಿದ್ದ ವೇಳೆ ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಪಂಪ್ಸೆಟ್, ಮನೆಯ ವಿದ್ಯುತ್ ಬಿಲ್ ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ತಿಳಿಸಿದ್ದರು.