ತಿರುವನಂತಪುರ( ಕೇರಳ):ವೆಂಜರಮೂಡು ಎಂಬಲ್ಲಿನ ಮನೆಯೊಂದರ ಮೇಲೆ ಕೇರಳ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ನಾಡ ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ ನಾಡ ಬಂದೂಕುಗಳಿಗೆ ಉಪಯೋಗಿಸುತ್ತಿದ್ದ ಪರಿಕರಗಳನ್ನು ಇದೇ ವೇಳೆ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೆರೆಗೆ ಕೇರಳ ಪೊಲೀಸರು ಈ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು. ಅಸೀಮ್ (44) ಸುರೇಂದ್ರನ್ (62) ಬಂಧಿತ ಆರೋಪಿಗಳಾಗಿದ್ದಾರೆ. ದೇಶಿ ನಿರ್ಮಿತ ಬಂದೂಕುಗಳನ್ನು ತಯಾರಿಸಲು ಬಳಸುವ ಉಪಕರಣಗಳು ದಾಳಿ ವೇಳೆ ಪತ್ತೆಯಾಗಿದ್ದು, ಟ್ರಿಗರ್ ಗಾರ್ಡ್, ಗನ್ ಬ್ಯಾರೆಲ್, ಟ್ರಿಗರ್ ಅಸೆಂಬ್ಲಿ ಘಟಕಗಳು ಸೇರಿದಂತೆ ಹಲವು ಹಳೆಯ ಗನ್‌ಗಳ ಬಿಡಿ ಭಾಗಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.