ಬೆಂಗಳೂರು :ಕೇರಳ ಗಡಿ ರಸ್ತೆಗಳಲ್ಲಿ ಸಂಚಾರಕ್ಕೆ ಕರ್ನಾಟಕ ಸರ್ಕಾರ ನಿರ್ಬಂಧ ಹೇರಿದೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ, ಸಮಸ್ಯೆ ಬಗೆಹರಿಸಬೇಕೆಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರ ಎರಡು ರಾಜ್ಯಗಳ ನಡುವಿನ ಸಂಚಾರ ನಿರ್ಬಂಧ ಭಾರತ ಸರ್ಕಾರ ನೀಡಿರುವ ಕೊರೊನಾ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಪಿಣರಾಯಿ ವಿಜಯನ್ ಪತ್ರದಲ್ಲಿ ಆರೋಪಿಸಿದ್ದಾರೆ.
ಇದನ್ನೂ ಓದಿ:ಕಾರು ಅಪಘಾತದಲ್ಲಿ ಇಬ್ಬರ ಸಾವು: ಒಂದೂವರೆ ಕೆಜಿ ಚಿನ್ನ ಪತ್ತೆ
ಕೊರೊನಾ ಹಿನ್ನೆಲೆ ಎರಡೂ ರಾಜ್ಯಗಳ ನಡುವಿನ ಬಹುತೇಕ ರಸ್ತೆಗಳು ಮುಚ್ಚಲ್ಪಟ್ಟಿವೆ. ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ವರದಿ ನೆಗೆಟಿವ್ ಬಂದರೆ ಮಾತ್ರ ಕರ್ನಾಟಕದೊಳಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.
ಇದರಿಂದಾಗಿ ವಿದ್ಯಾರ್ಥಿಗಳು, ಅವಶ್ಯಕ ವಸ್ತುಗಳನ್ನು ಸಾಗಿಸುವ ಟ್ರಕ್ಗಳು ಮತ್ತು ಚಿಕಿತ್ಸೆಗಾಗಿ ಕರ್ನಾಟಕಕ್ಕೆ ಹೊರಡುವ ರೋಗಿಗಳಿಗೆ ತೊಂದರೆಯಾಗುತ್ತಿದೆ ಎಂದು ಪಿಣರಾಯಿ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೋಮವಾರವಷ್ಟೇ ಮಾತನಾಡಿದ್ದ ಪಿಣರಾಯಿ ವಿಜಯನ್ ಕರ್ನಾಟಕದ ಡಿಜಿಪಿ ಅವಶ್ಯಕ ಸರಕು ಸಾಮಗ್ರಿಗಳನ್ನ ಸಾಗಿಸುವ ವಾಹನಗಳಿಗೆ ಗಡಿಯಲ್ಲಿ ಯಾವುದೇ ಅಡೆತಡೆಯಿರುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದ್ದರು.
ನಿರ್ಬಂಧವಲ್ಲ.. ಮಾರ್ಗಸೂಚಿ ಜಾರಿ ಅಷ್ಟೇ..!
ಕೇರಳ ಸಿಎಂ ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎರಡೂ ರಾಜ್ಯಗಳ ನಡುವೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಕೇರಳದಿಂದ ಬರುವ ಪ್ರಯಾಣಿಕರಿಗೆ 72 ಗಂಟೆ ಮೀರದ ಆರ್ಟಿ-ಪಿಸಿಆರ್ ನೆಗೆಟಿವ್ ವರದಿಯ ಪ್ರಮಾಣ ಪತ್ರ ಕಡ್ಡಾಯ ಮಾಡಲಾಗಿದೆ ಎಂದಿದ್ದಾರೆ