ತಿರುವನಂತಪುರಂ: ಕೇರಳದಲ್ಲಿ 2 ನೇ ಅವಧಿಗೆ ಎಲ್ಡಿಎಫ್ ನೇತೃತ್ವದ ಸರ್ಕಾರ ರಚನೆಯಾಗಿದ್ದು, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿಧಾನಸಭೆಯಲ್ಲಿ ಮೊದಲ ಭಾಷಣ ಮಾಡಿದರು. ಸರ್ಕಾರವು, ಪ್ರಜಾಪ್ರಭುತ್ವ, ಜಾತ್ಯಾತೀತತೆ, ಸಮಾನತೆಯನ್ನು ಎತ್ತಿ ಹಿಡಿಯಲಿದೆ. ಸಾಮಾಜಿಕ-ಆರ್ಥಿಕ ಅಸಮಾನತೆಗಳನ್ನು ನಿರ್ಮೂಲನೆ ಮಾಡಿ, ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಿದೆ ಎಂದರು.
ಆರೋಗ್ಯ ಕ್ಷೇತ್ರಕ್ಕೆ 1,000 ಕೋಟಿ ರೂ.
ಕೋವಿಡ್ ಎರಡನೇ ಅಲೆಗೆ ರಾಜ್ಯದ ಆರೋಗ್ಯ ಕ್ಷೇತ್ರ ತತ್ತರಿಸಿ ಹೋಗಿದ್ದು, ಈ ವಲಯದ ಉತ್ತೇಜನಕ್ಕಾಗಿ 1 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ. ಒಂದು ಕೋಟಿ ಲಸಿಕೆಗಳನ್ನು ಖರೀದಿಸಲು ರಾಜ್ಯವು ದೇಶೀಯ ತಯಾರಕಾ ಕಂಪನಿಗಳನ್ನು ಸಂಪರ್ಕಿಸಿದೆ. ಕೋವಿಡ್ ವಿರುದ್ಧದ ಹೋರಾಟ ಮುಂದುವರಿಸಲಾಗುವುದು. ಎಲ್ಲರಿಗೂ ವ್ಯಾಕ್ಸಿನೇಷನ್ ಉಚಿತವಾಗಿ ನೀಡಲಾಗುವುದು ಎಂದರು.
ಫ್ರೀ ಲಸಿಕೆ ವಿತರಣೆ ಹಾಗೂ ಕ್ಷಿಪ್ರಗತಿಯ ವ್ಯಾಕ್ಸಿನೇಷನ್ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಡುವವರ ಸಂಖ್ಯೆ ಕಡಿಮೆಯಾಗಿದೆ ಎಂದರು.