ತಿರುವನಂತಪುರಂ: ಸರ್ಕಾರ ಮತ್ತು ರಾಜ್ಯಪಾಲರ ಕಚೇರಿಯ ನಡುವಿನ ಗುದ್ದಾಟ ಉಲ್ಬಣಗೊಂಡ ಒಂದು ದಿನದ ಬಳಿಕ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಸ್ಥಾನದಿಂದ ತೆಗೆದುಹಾಕಿ ಪಿಣರಾಯಿ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ರಾಜ್ಯಪಾಲರು ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಪ್ರತಿನಿಧಿಯಾಗಿದ್ದಾರೆ ಮತ್ತು ರಾಜ್ಯದ ಎಡ ಪ್ರಜಾಸತ್ತಾತ್ಮಕ ರಂಗದ (ಎಲ್‌ಡಿಎಫ್) ಆಡಳಿತದೊಂದಿಗೆ ದಿನನಿತ್ಯ ಸಂಘರ್ಷಕ್ಕೆ ಹೆಸರುವಾಸಿಯಾಗಿದ್ದಾರೆ. ಹೀಗಾಗಿ, ರಾಜ್ಯಪಾಲರ ಬದಲಿಗೆ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಗಣ್ಯ ವ್ಯಕ್ತಿಯನ್ನು ನೇಮಿಸಲು ವಿಶ್ವವಿದ್ಯಾಲಯದ ನಿಯಮಗಳನ್ನು ಬದಲಾಯಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.