ಎರ್ನಾಕುಲಂ :ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ 13 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಕೇರಳ ಹೈಕೋರ್ಟ್ ಅನುಮತಿಸಿದೆ. 26 ವಾರಗಳ ಗರ್ಭಿಣಿಯಾಗಿದ್ದ ಬಾಲಕಿ ಗರ್ಭಪಾತವನ್ನು 24 ಗಂಟೆಗಳೊಳಗೆ ಮಾಡಬೇಕೆಂದು ನ್ಯಾಯಾಲಯ ಆದೇಶಿಸಿದೆ. ಸಂತ್ರಸ್ತೆ ತಂದೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ಪುರಸ್ಕರಿಸಿದೆ.
ಈ ಹಿಂದಿನ ವಿಚಾರಣೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ, ವರದಿ ಸಲ್ಲಿಸಲು ವೈದ್ಯಕೀಯ ಮಂಡಳಿ ರಚಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿತ್ತು. ವೈದ್ಯಕೀಯ ಮಂಡಳಿ ನಿನ್ನೆ ವರದಿ ಸಲ್ಲಿಸಿತ್ತು.