ಎರ್ನಾಕುಲಂ(ಕೇರಳ): ಕೋವಿಡ್ ಲಸಿಕೆ ಉತ್ಪಾದಿಸುವ ಫಾರ್ಮಾ ಕಂಪನಿಯಾದ ಭಾರತ್ ಬಯೋಟೆಕ್ ಮತ್ತು ಸೀರಮ್ ಸಂಸ್ಥೆಗೆ ಕೇರಳ ಹೈಕೋರ್ಟ್ ನೋಟಿಸ್ ನೀಡಿದೆ.
ಸದ್ಯಕ್ಕೆ ಇದೆ ಎನ್ನಲಾದ ತಾರತಮ್ಯದ ವ್ಯಾಕ್ಸಿನೇಷನ್ ನೀತಿಯನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ ಈ ನಡೆ ಪ್ರದರ್ಶಿಸಿದ್ದು, ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನೂ ಕೂಡಾ ಕೇಳಿದೆ.
ಎಲ್ಲಾ ಕೋವಿಡ್ ಲಸಿಕೆಗಳಿಗೆ ಏಕರೂಪದ ಬೆಲೆಗಳನ್ನು ನಿಗದಿಪಡಿಸಬೇಕೆಂದು ಮತ್ತು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲಾ ನಾಗರಿಕರಿಗೆ ಉಚಿತವಾಗಿ ಲಸಿಕೆ ನೀಡುವಂತೆ ನೋಟಿಸ್ ನೀಡಲಾಗಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಬೇಕೆಂದು ನ್ಯಾಯಾಲಯ ಹೇಳಿದೆ.
ಇದನ್ನೂ ಓದಿ:ಐಸಿಯು ಬೆಡ್ ನೀಡದ ಆಸ್ಪತ್ರೆ ಸಿಬ್ಬಂದಿ ಮೇಲೆ ಕುಟುಂಬಸ್ಥರಿಂದ ಹಲ್ಲೆ.. ವಿಡಿಯೋ
ವಿಭಿನ್ನ ಲಸಿಕೆಗಳಿಗೆ ವಿಭಿನ್ನ ಬೆಲೆಗಳನ್ನು ವಿಧಿಸುವುದು ತಾರತಮ್ಯವಾಗಿದೆ ಮತ್ತು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಉಚಿತ ಲಸಿಕೆಗಳನ್ನು ನೀಡದಿರುವುದು ಅಸಂವಿಧಾನಿಕವಾಗಿದೆ ಎಂದು ನೋಟಿಸ್ನಲ್ಲಿ ಆರೋಪಿಸಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಯೋಜನೆಗೆ ಅನುಗುಣವಾಗಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ರಾಜ್ಯಗಳಿಗೆ ವಹಿಸದೇ ಕೇಂದ್ರ ಸರ್ಕಾರವೇ ಅದರ ಹೊಣೆ ಹೊರಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸಿ.ಸಿ. ಪ್ರಮೋದ್ ಅವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದೇ ರೀತಿಯ ಪ್ರಕರಣ ಸುಪ್ರೀಂ ಕೋರ್ಟ್ ಮುಂದೆ ಬಾಕಿ ಇದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.