ಕೊಚ್ಚಿ (ಕೇರಳ):29 ಲಕ್ಷ ರೂ. ಆರ್ಥಿಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸನ್ನಿ ಲಿಯೋನ್ ಅವರ ಬಂಧಿಸದಂತೆ ಕೇರಳ ಹೈಕೋರ್ಟ್ ತಡೆ ನೀಡಿದೆ.
ಸನ್ನಿ ಲಿಯೋನ್ ಬಂಧಿಸದಂತೆ ಕೇರಳ ಹೈಕೋರ್ಟ್ ಮಧ್ಯಂತರ ಆದೇಶ - ಕೇರಳ ಹೈಕೋರ್ಟ್
ಆರ್ಥಿಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸನ್ನಿ ಲಿಯೋನ್ ಅವರ ಬಂಧಿಸದಂತೆ ಕೇರಳ ಹೈಕೋರ್ಟ್ ತಡೆ ನೀಡಿದೆ.
ನ್ಯಾಯಮೂರ್ತಿ ಅಶೋಕ್ ಮೆನನ್ ನೇತೃತ್ವದ ನ್ಯಾಯಪೀಠವು ನಟನ ಜಾಮೀನು ಅರ್ಜಿ ವಿಚಾರಣೆ ನಡೆಸಿ ಈ ಮಧ್ಯಂತರ ಆದೇಶ ನೀಡಿದೆ. ಇದೇ ವೇಳೆ, ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಲು ಪೊಲೀಸರಿಗೆ ಅನುಮತಿ ನೀಡಿದೆ. ಆದರೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್ಪಿಸಿ)41 ಎ ಅಡಿ ನೋಟಿಸ್ ನೀಡಿದ ಬಳಿಕವೇ ವಿಚಾರಣೆ ನಡೆಸುವಂತೆ ಸೂಚಿಸಿದೆ.
ಪೆರುಂಬವೂರ್ ಮೂಲದ ಆರ್ ಶಿಯಾಸ್ ಎಂಬುವವರು ಎರಡು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಭರವಸೆ ನೀಡಿ ಸನ್ನಿ ಲಿಯೋನ್ 29 ಲಕ್ಷ ರೂ. ಸ್ವೀಕರಿಸಿ ಕಾರ್ಯಕ್ರಮಕ್ಕೆ ಹಾಜರಾಗಿರಲಿಲ್ಲ ಎಂದು ಆರೋಪಿಸಿದ್ದರು. ಅಲ್ಲದೇ ಈ ಸಂಬಂಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸನ್ನಿ ಲಿಯೋನ್ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು.