ಕರ್ನಾಟಕ

karnataka

ETV Bharat / bharat

ನಿರ್ಮಾಪಕಿ ಆಯಿಷಾ ಸುಲ್ತಾನಾಗೆ ಮಧ್ಯಂತರ ಜಾಮೀನು ನೀಡಿದ ಕೇರಳ ಹೈಕೋರ್ಟ್

ದೇಶದ್ರೋಹ ಆರೋಪ ಎದುರಿಸುತ್ತಿರುವ ನಟಿ, ಚಲನಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನಾ ಅವರಿಗೆ ಕೇರಳ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

Aisha Sultana
ಆಯಿಷಾ ಸುಲ್ತಾನಾ

By

Published : Jun 25, 2021, 12:46 PM IST

ತಿರುವನಂತಪುರಂ: ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ವಿರುದ್ಧ ಹೇಳಿಕೆ ನೀಡಿ ದೇಶದ್ರೋಹ ಆರೋಪ ಎದುರಿಸುತ್ತಿರುವ ನಟಿ, ಚಲನಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನಾ ಅವರಿಗೆ ಕೇರಳ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಪ್ರಕರಣ ಹಿನ್ನೆಲೆ

ಮಲಯಾಳಂ ಟಿ.ವಿ ಚಾನೆಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚರ್ಚೆಯ ವೇಳೆ ಲಕ್ಷದ್ವೀಪದಲ್ಲಿ ಕೋವಿಡ್-19 ಹರಡಲು 'ಜೈವಿಕ ಶಸ್ತ್ರ' ಬಳಸಲಾಗಿದೆ ಎಂದು ಕೇಂದ್ರ ಸರ್ಕಾರ ಹಾಗೂ ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ವಿರುದ್ಧ ಸುಲ್ತಾನಾ ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ದೇಶದ್ರೋಹಿ ಹೇಳಿಕೆ ಆರೋಪ ಕೇಸ್: 3ನೇ ದಿನವೂ ವಿಚಾರಣೆಗೆ ಹಾಜರಾದ ಆಯಿಷಾ

ಈ ಹೇಳಿಕೆಯನ್ನು ಖಂಡಿಸಿದ ಬಿಜೆಪಿಯ ಲಕ್ಷದ್ವೀಪ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್ ಅವರು ಜೂನ್ 11 ರಂದು ಆಯಿಷಾ ಸುಲ್ತಾನಾ ವಿರುದ್ಧ ಲಕ್ಷದ್ವೀಪದ ಕವರತ್ತಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ಆಯಿಷಾ ವಿರುದ್ಧ ಐಪಿಸಿ ಸೆಕ್ಷನ್ 124ಎ (ದೇಶದ್ರೋಹ) ಮತ್ತು 153 ಬಿ (ದ್ವೇಷಪೂರಿತ ಭಾಷಣ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ABOUT THE AUTHOR

...view details