ಕರ್ನಾಟಕ

karnataka

ETV Bharat / bharat

ಪೋಕ್ಸೋ ಆರೋಪಿಗಳಿಗೂ ನಿರೀಕ್ಷಣಾ ಜಾಮೀನು ನೀಡಬಹುದು : ಕೇರಳ ಹೈಕೋರ್ಟ್​ ಆದೇಶ

ಪೋಕ್ಸೊ ಪ್ರಕರಣಗಳಲ್ಲಿ ಪ್ರಾಥಮಿಕ ಹಂತದ ಸಾಕ್ಷ್ಯಾಧಾರಗಳಿಲ್ಲದಿದ್ದಲ್ಲಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಕೊಡಬಹುದು ಎಂದು ಕೇರಳ ಹೈಕೋರ್ಟ್​ ಆದೇಶ ನೀಡಿದೆ.

kerala-high-court-with-important-verdict-in-sexual-assault-cases-against-children
ಪೋಕ್ಸೋ ಆರೋಪಿಗಳಿಗೂ ನಿರೀಕ್ಷಣಾ ಜಾಮೀನು ನೀಡಬಹುದು : ಕೇರಳ ಹೈಕೋರ್ಟ್​ ಆದೇಶ

By ETV Bharat Karnataka Team

Published : Sep 23, 2023, 5:46 PM IST

Updated : Sep 23, 2023, 6:17 PM IST

ಎರ್ನಾಕುಲಂ (ಕೇರಳ) : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್​ ಇಂದು ಆದೇಶ ನೀಡಿದೆ. ಪೋಕ್ಸೋ ಪ್ರಕರಣಗಳಲ್ಲಿ ಪ್ರಾಥಮಿಕ ಹಂತದ ಸಾಕ್ಷ್ಯಾಧಾರಗಳಿಲ್ಲದಿದ್ದಲ್ಲಿ ಪ್ರಕರಣದ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ಹೈಕೋರ್ಟ್​ ತಿಳಿಸಿದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಸಂಬಂಧ ಆರೋಪಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.

ಸುಳ್ಳು ಆರೋಪದ ಮೇಲೆ ಅಮಾಯಕರ ವಿರುದ್ಧ ಪ್ರಕರಣ ದಾಖಲಾದ ಹಲವು ಪ್ರಕರಣಗಳು ನಮ್ಮ ಕಣ್ಣ ಮುಂದಿವೆ. ಇಂತಹ ಸಂದರ್ಭಗಳಲ್ಲಿ ವಾಸ್ತವಾಂಶಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಶಿಕ್ಷಿಸುವುದಷ್ಟೇ ಅಲ್ಲ. ಜೊತೆಗೆ ಅಮಾಯಕರನ್ನೂ ರಕ್ಷಿಸುವುದು ಮುಖ್ಯವಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಮತ್ತೊಂದು ಪ್ರಕರಣದ ತೀರ್ಪಿನಲ್ಲಿ, ಕೌಟುಂಬಿಕ ನ್ಯಾಯಾಲಯದಲ್ಲಿ ತಂದೆಯ ವಿರುದ್ಧ ಮಕ್ಕಳ ಮೇಲಿನ ದೌರ್ಜನ್ಯದ ಹಲವು ಸುಳ್ಳು ಪ್ರಕರಣಗಳು ದಾಖಲಾಗಿರುವುದನ್ನು ಹೈಕೋರ್ಟ್​ ಗಮನಿಸಿದೆ. ಇಂತಹ ಸಂದರ್ಭಗಳಲ್ಲಿ ಆರೋಪಿಗಳ ನಿರೀಕ್ಷಣಾ ಜಾಮೀನು ನಿಷೇಧಿಸಿದರೆ ನ್ಯಾಯವನ್ನು ನಿರಾಕರಿಸಿದಂತಾಗುತ್ತದೆ ಎಂದು ನ್ಯಾಯಮೂರ್ತಿ ಕೌಸರ್​ ಎಡಪ್ಪಗತ್​ ತಿಳಿಸಿದ್ದಾರೆ.

ತಮ್ಮ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ವಡಕ್ಕೇರಾ ಮತ್ತು ವಡಕಂಚೇರಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 2 ಪ್ರಕರಣ ಸಂಬಂಧ ಆರೋಪಿಗಳು ಹೈಕೋರ್ಟ್​ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಈ ಆದೇಶ ಹೊರಡಿಸಿದ್ದಾರೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಕ್ರಿಮಿನಲ್ ಪ್ರೊಸೀಜರ್ ಕೋಡ್‌ನಲ್ಲಿ ನಿಬಂಧನೆ ಇದೆ. ಆದರೆ ಈ ನಿಬಂಧನೆ ಎಲ್ಲ ಕಾಲಕ್ಕೂ ಅನ್ವಯಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಇದನ್ನೂ ಓದಿ :ಪಿತೃತ್ವ ವಿವಾದದ ಪ್ರತಿ ಪ್ರಕರಣದಲ್ಲೂ ಡಿಎನ್​ಎ ಪರೀಕ್ಷೆ ಅಗತ್ಯವಿಲ್ಲ: ಕೇರಳ ಹೈಕೋರ್ಟ್​​

Last Updated : Sep 23, 2023, 6:17 PM IST

ABOUT THE AUTHOR

...view details