ತಿರುವನಂತಪುರಂ(ಕೇರಳ):ದೇವರ ನಾಡು ಕೇರಳದಲ್ಲಿ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪಿಣರಾಯಿ ವಿಜಯನ್ ಪದಗ್ರಹಣ ಮಾಡಿದ್ದಾರೆ. ಕ್ಯಾಬಿನೆಟ್ ಸದಸ್ಯರೊಂದಿಗೆ ವಿಜಯನ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಕೇರಳದ ರಾಜ್ಯಪಾಲರಾಗಿರುವ ಆರೀಪ್ ಮಹಮ್ಮದ್ ಖಾನ್ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಬೋಧಿಸಿದರು.
ಕಳೆದ ಕೆಲ ದಿನಗಳ ಹಿಂದೆ ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು. ಇಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಪಕ್ಷ 91 ಸ್ಥಾನಗಳಲ್ಲಿ ಗೆಲುವು ದಾಖಲು ಮಾಡಿತ್ತು.