ತಿರುವನಂತಪುರ (ಕೇರಳ):ಕೇರಳದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಕುರಿತಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದು ಕೊಲ್ಲಂ, ಅಲಪ್ಪುಳ ಮತ್ತು ಕಾಸರಗೋಡು ಹೊರತುಪಡಿಸಿ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಲ್ಲಂ, ಆಲಪ್ಪುಳ ಮತ್ತು ಕಾಸರಗೋಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಕಣ್ಣೂರು ಮತ್ತು ಕಾಸರಗೋಡು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಶುಕ್ರವಾರದವರೆಗೆ (22.10.21) ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಇಡುಕ್ಕಿ ಸೇರಿದಂತೆ ವಿವಿಧ ಅಣೆಕಟ್ಟುಗಳನ್ನು ತೆರೆಯಲಾಗಿದ್ದು ನದಿಪಾತ್ರದ ಜನರಿಗೆ ಎಚ್ಚರ ವಹಿಸಲು ಸೂಚಿಸಲಾಗಿದೆ.