ತಿರುವನಂತಪುರಂ:ಹೊಸ ಕೃಷಿ ಕಾನೂನುಗಳ ಬಗ್ಗೆ ಚರ್ಚಿಸಲು ರಾಜ್ಯವಿಧಾನಸಭೆಯಲ್ಲಿ ವಿಶೇಷ ಅಧಿವೇಶನವನ್ನು ಕರೆಯುವ ಸರ್ಕಾರದ ಯೋಜನೆಗೆ ಗವರ್ನರ್ ಆರಿಫ್ ಮತ್ತೊಮ್ಮೆ ಬ್ರೇಕ್ ಹಾಕಿದ್ದಾರೆ. ಈ ಹಿಂದೆಯೂ ಮನವಿ ಸಲ್ಲಿಸಲಾಗಿದ್ದು, ಅದಕ್ಕೂ ಸಹ ಒಪ್ಪಿಗೆ ನೀಡಿರಲಿಲ್ಲ.
ವಿಶೇಷ ಅಧಿವೇಶನಕ್ಕೆ ಕಾರಣವೇನೆಂದು ರಾಜ್ಯಪಾಲರು ಪ್ರತಿಕ್ರಿಯೆ ಕೋರಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರ, "ರೈತರ ಮೇಲೆ ಪರಿಣಾಮ ಬೀರುವ ನಿರ್ಣಾಯಕ ವಿಷಯಗಳ ಬಗ್ಗೆ ಚರ್ಚಿಸಬೇಕಾಗಿದೆ" ಎಂದು ತಿಳಿಸಿತ್ತು. ಆದರೆ ಇಷ್ಟು ಕಡಿಮೆ ಸಮಯದಲ್ಲಿ ವಿಶೇಷ ಅಧಿವೇಶನವನ್ನು ಕರೆಯಲು ಯಾವುದೇ ತುರ್ತು ಪರಿಸ್ಥಿತಿ ಇಲ್ಲ ಎಂದು ಉಲ್ಲೇಖಿಸಿ ಮತ್ತು ಸರ್ಕಾರದ ವಿವರಣೆ ‘ಅತೃಪ್ತಿಕರ’ ಎಂದು ಗವರ್ನರ್ ಆರಿಫ್ ಮೊಹಮ್ಮದ್ ಖಾನ್ ಮನವಿಯನ್ನು ನಿರಾಕರಿಸಿದ್ದರು.