ಲಕ್ನೋ:ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬೆದರಿಕೆಯೊಡ್ಡಿರುವ ಆಡಿಯೋವೊಂದು ವೈರಲ್ ಆಗಿದೆ. ಆಡಿಯೋದಲ್ಲಿರುವ ಧ್ವನಿ ಖಲಿಸ್ತಾನ್ ಬೆಂಬಲಿಗ ಗುರುಪತ್ವಂತ್ ಸಿಂಗ್ ಪನ್ನುದ್ದು ಎನ್ನಲಾಗಿದ್ದು, 59 ಸೆಕೆಂಡ್ಗಳ ಆಡಿಯೋ ರೆಕಾರ್ಡಿಂಗ್‌ನಲ್ಲಿ, ಆಗಸ್ಟ್ 15ರಂದು ಸಿಎಂ ಯೋಗಿಗೆ ಲಕ್ನೋದಲ್ಲಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ ಎಂದು ಬೆದರಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಡಿಕೆ ಠಾಕೂರ್, ದೆಹಲಿಯಿಂದ ಆಡಿಯೋ ಲಭ್ಯವಾಗಿರುವ ಮಾಹಿತಿ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ, ಅಲ್ಲದೆ ಕೃತ್ಯ ಎಸಗಿರುವ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಈ ಬಗ್ಗೆ ಲಕ್ನೋದಲ್ಲಿ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಭಾರತದಲ್ಲಿ ನಿಷೇಧಿತ ಸಂಘಟನೆಯಾದ ಸಿಖ್ ಫಾರ್ ಜಸ್ಟಿಸ್ (SFJ) ನ ನಾಯಕ ಗುರುಪತ್ವಂತ್ ಸಿಂಗ್ ಪನ್ನು ಈ ಹಿಂದೆಯೂ ಅನೇಕ ರಾಜಕಾರಣಿಗಳಿಗೆ ಬೆದರಿಕೆ ಹಾಕಿದ್ದ.