ಮುಂಬೈ:ಖಲಿಸ್ತಾನಿ ಉಗ್ರರು ನಗರದಲ್ಲಿ ಭಯೋತ್ಪಾದಕ ಕೃತ್ಯ ನಡೆಸಬಹುದೆಂದು ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಎಲ್ಲ ಸಿಬ್ಬಂದಿ ರಜೆ ರದ್ದುಗೊಳಿಸಿದೆ. ನಾಳೆ ಎಲ್ಲರೂ ಕರ್ತವ್ಯಕ್ಕೆ ಹಾಜರಾಗುವಂತೆ ಮಹತ್ವದ ಆದೇಶ ಸಹ ಹೊರಡಿಸಲಾಗಿದೆ.
ಹೆಚ್ಚಿನ ಭದ್ರತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಡಿಸೆಂಬರ್ 31ರಂದು ಎಲ್ಲ ಪೊಲೀಸ್ ಸಿಬ್ಬಂದಿ ರಜೆ ಹಾಗೂ ವಾರದ ರಜೆ ರದ್ದುಗೊಳಿಸಲಾಗಿದೆ. ಡಿಸೆಂಬರ್ 31ರಂದು ಮುಂಬೈನ ಕೆಲವೊಂದು ಪ್ರದೇಶಗಳಲ್ಲಿ ಹೆಚ್ಚಿನ ಜನದಟ್ಟಣೆ ಕಂಡು ಬರಲಿದ್ದು, ಈ ಪ್ರದೇಶಗಳ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಬಹುದೆಂಬ ಮಾಹಿತಿ ಲಭ್ಯವಾಗಿದೆ.