ಬೆಂಗಳೂರು: ರಾಜಸ್ಥಾನದ ಕಾಂಗ್ರೆಸ್ ಬಿಕ್ಕಟ್ಟಿನ ನಂತರ ಎಐಸಿಸಿ ಅಧ್ಯಕ್ಷರ ಚುನಾವಣೆಯ ಚಿತ್ರಣ ಬದಲಾಗಿದೆ. ಅಶೋಕ ಗೆಹ್ಲೋಟ್ ಸ್ಪರ್ಧಿಸುವುದು ಬಹುಕೇತ ಅನುಮಾನವಾಗಿರುವ ಬೆನ್ನಲ್ಲೆಯಲ್ಲೇ ಕನ್ನಡಿಗರಾದ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುಂಚೂಣಿಗೆ ಬಂದಿದೆ. ಇದರ ನಡುವೆ ಎಐಸಿಸಿ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಕೇಳಿದರೆ ಖರ್ಗೆ ಅವರು ಸ್ಪರ್ಧಿಸಲು ಹಿಂಜರಿಯುವುದಿಲ್ಲ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಅಕ್ಟೋಬರ್ 17ರಂದು ನಡೆಯಲಿರುವ ಎಐಸಿಸಿ ಅಧ್ಯಕ್ಷೀಯ ಚುನಾವಣೆಗೆ ಮಾಜಿ ಕೇಂದ್ರ ಸಚಿವ ಹಾಗೂ ನೆಹರೂ - ಗಾಂಧಿ ಕುಟುಂಬದ ನಿಷ್ಠಾವಂತ ಖರ್ಗೆ ಅವರಂತಹ ನಾಯಕರ ಹೆಸರುಗಳು ಚಾಲ್ತಿಗೆ ಬಂದಿವೆ. ಇದೀಗ ಪಕ್ಷದ ನಿರ್ಧಾರಕ್ಕೆ ನಾನು ಬದ್ಧರಾಗಿರುತ್ತೇನೆ ಎಂದು ಖರ್ಗೆ ಅವರು ಸೋನಿಯಾ ಗಾಂಧಿ ಅವರಿಗೆ ಹೇಳಿದ್ದಾರೆ. ಪಕ್ಷ (ಸೋನಿಯಾ ಗಾಂಧಿ) ತಮಗೆ ಏನು ಸೂಚಿಸುತ್ತದೋ ಅದನ್ನು ಖರ್ಗೆ ಅವರು ಖಂಡಿತವಾಗಿಯೂ ಮಾಡುತ್ತಾರೆ ಅಂತಾ ನಿಕಟವರ್ತಿಯೊಬ್ಬರು ಹೇಳಿದ್ದಾರೆ ಎಂದು ಸರ್ಕಾರಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಸೇರಿ ಹಲವು ವಿರೋಧ ಪಕ್ಷದ ನಾಯಕರೊಂದಿಗೆ ಖರ್ಗೆ ಅವರು ಉತ್ತಮ ಸಂಪರ್ಕ ಮತ್ತು ಬಾಂಧವ್ಯ ಹೊಂದಿದ್ದಾರೆ. ಇದು ಪಕ್ಷಕ್ಕೆ ಹೆಚ್ಚುವರಿ ಪ್ರಯೋಜನವಾಗಿದೆ. ಮುಖ್ಯವಾಗಿ ಖರ್ಗೆ ಅವರು ಎಂದಿನಂತೆ ತೀಕ್ಷ್ಣರಾಗಿದ್ದಾರೆ. ಖರ್ಗೆ ಅವರಿಗೆ ಹಿಂದಿ ಮೇಲೆ ಹಿಡಿತ ಹೊಂದಿದ್ದಾರೆ. ತಮ್ಮ ಹಿಂದಿಯಿಂದಲೇ ಅಭಿಮಾನಿಗಳನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದರು.