ಕರ್ನಾಟಕ

karnataka

ETV Bharat / bharat

ಮರು ನಾಮಕರಣ: ರಾಜೀವ್​ ಗಾಂಧಿ ಖೇಲ್ ರತ್ನ ಪ್ರಶಸ್ತಿ ಇನ್ನು ಮುಂದೆ 'ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ' - ಪ್ರಧಾನಿ ನರೇಂದ್ರ ಮೋದಿ

ನಮ್ಮ ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡುವುದು ಸೂಕ್ತ ಎಂದು ರಾಜೀವ್​ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ 'ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ' ಎಂದು ಪ್ರಧಾನಿ ನರೇಂದ್ರ ಮೋದಿ ಮರುನಾಮಕರಣ ಮಾಡಿದ್ದಾರೆ.

ಪ್ರಧಾನಿ
ಪ್ರಧಾನಿ

By

Published : Aug 6, 2021, 1:24 PM IST

ನವದೆಹಲಿ:ಇನ್ಮುಂದೆ 'ರಾಜೀವ್​ ಗಾಂಧಿ ಖೇಲ್ ರತ್ನ ಪ್ರಶಸ್ತಿ'ಯನ್ನು 'ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ' ಎಂದು ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

"ಭಾರತದಾದ್ಯಂತ ಅನೇಕ ನಾಗರಿಕರು ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡಲು ಮನವಿ ಮಾಡುತ್ತಾ ಬಂದಿದ್ದು, ಅವರ ಅಭಿಪ್ರಾಯಗಳಿಗಾಗಿ ನಾನು ಧನ್ಯವಾದಗಳನ್ನ ಅರ್ಪಿಸುತ್ತೇನೆ. ಅವರ ಭಾವನೆಗಳನ್ನು ಗೌರವಿಸಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ" ಎಂದು ಪಿಎಂ ಮೋದಿ ಟ್ವೀಟ್​ ಮಾಡಿದ್ದಾರೆ.

ಪ್ರಧಾನಿ ಮೋದಿ - ಮೇಜರ್ ಧ್ಯಾನ್ ಚಂದ್

ಹಾಕಿಪಟು ಮೇಜರ್ ಧ್ಯಾನ್ ಚಂದ್ ಅವರು ಭಾರತದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿ ಒಬ್ಬರು, ಅವರು ಭಾರತಕ್ಕೆ ಗೌರವ ಮತ್ತು ಹೆಮ್ಮೆಯನ್ನು ತಂದಿದ್ದರು. ನಮ್ಮ ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಅವರ ಹೆಸರನ್ನು ಇಡುವುದು ಸೂಕ್ತ ಎಂದು ಪ್ರಧಾನಿ ತಿಳಿಸಿದ್ದಾರೆ.

ABOUT THE AUTHOR

...view details