ಸೋನಿಪತ್(ಹರಿಯಾಣ):ಸಿಂಘು-ಕುಂಡ್ಲಿ ಗಡಿಯಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಸುಮಾರು 35 ವರ್ಷದ ವ್ಯಕ್ತಿಯ ದೇಹವನ್ನು ಕತ್ತರಿಸಿ ಬ್ಯಾರಿಕೇಡ್‌ಗಳಲ್ಲಿ ನೇತು ಹಾಕಲಾಗಿದೆ. ಇಂದು ಬೆಳಗಿನ ಜಾವ ಸಿಂಘು ಗಡಿಯಲ್ಲಿರುವ ರೈತರ ಪ್ರತಿಭಟನಾ ಮುಖ್ಯ ವೇದಿಕೆಯ ಬಳಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಚೂಪಾದ ಆಯುಧದಿಂದ ವ್ಯಕ್ತಿಯ ದೇಹದ ಮೇಲೆ ದಾಳಿ ಮಾಡಿದ ಗುರುತುಗಳಿವೆ. ಒಂದು ಕೈಯನ್ನು ಕತ್ತರಿಸಲಾಗಿದೆ. ಘಟನಾ ಸ್ಥಳದಲ್ಲಿ ಪ್ರತಿಭಟನಾನಿರತರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ. ಪೊಲೀಸರಿಗೂ ಸಹ ಮೃತದೇಹದ ಬಳಿ ಹೋಗಲು ಆಗದಷ್ಟು ಜನ ಕಿಕ್ಕಿರಿದಿದ್ದಾರೆ. ನಿಹಾಂಗ್‌ಗಳು ಈ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.