ಮುಂಬೈ: ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ ಹಾಗೂ ವಂಚನೆ ಪ್ರಕರಣದ ಆರೋಪಿಯಾಗಿದ್ದ ಕಿರಣ್ ಗೋಸಾವಿ ಪುಣೆ ಪೊಲೀಸರಿಗೆ ಶರಣಾಗಲಿದ್ದಾರೆ ಎನ್ನಲಾಗಿದೆ. ವಂಚನೆ ಆರೋಪದಡಿ ಪುಣೆ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿದ್ದು, ಅವರಿಗಾಗಿ ಶೋಧ ನಡೆಸಲಾಗುತ್ತಿತ್ತು.
ಉದ್ಯೋಗಾಕಾಂಕ್ಷಿಯಿಂದ ಹಣ ಪಡೆದಿರುವ ಆರೋಪ ಕೇಳಿ ಬಂದಿತ್ತು. ಇದಕ್ಕೂ ಮೊದಲು ಎನ್‌ಸಿಬಿ ವಶದಲ್ಲಿದ್ದ ಶಾರುಖ್ ಪುತ್ರ ಆರ್ಯನ್ ಖಾನ್ ಜೊತೆ ಸೆಲ್ಫಿ ತೆಗೆದುಕೊಂಡಿದ್ದು, ವೈರಲ್ ಆಗಿತ್ತು. ಹೀಗಾಗಿ ಅವರ ವಿರುದ್ಧ ಎನ್‌ಸಿಬಿ ಲುಕ್ಔಟ್ ನೋಟಿಸ್ ಹೊರಡಿಸಿತ್ತು.