ರಾಂಬನ್ (ಜಮ್ಮು ಮತ್ತು ಕಾಶ್ಮೀರ):ಜಮ್ಮುವಿನಿಂದ ಶ್ರೀನಗರಕ್ಕೆ ಹೋಗುತ್ತಿದ್ದಾಗ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಕಿರಣ್ ರಿಜಿಜು ಅವರ ಕಾರ್ ಶನಿವಾರ ರಸ್ತೆ ಅಪಘಾತಕ್ಕೀಡಾಗಿದೆ. ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಸಚಿವರನ್ನು ಸುರಕ್ಷಿತವಾಗಿ ಬೇರೆ ಸ್ಥಳಕ್ಕೆ ಕರೆದೊಯ್ಯಲಾಯಿತು. ಬಳಿಕ ಸ್ಥಳಕ್ಕೆ ದೌಡಾಯಿಸಿದ ರಾಂಬನ್ ಪೊಲೀಸರು ಪರಿಶೀಲನೆ ನಡೆಸಿದರು.
ಕೇಂದ್ರ ಕಾನೂನು ಸಚಿವ ಸುರಕ್ಷಿತ:ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್ ಪ್ರದೇಶದಲ್ಲಿ ಶನಿವಾರ ಸಂಜೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಅಧಿಕೃತ ವಾಹನ ಸಣ್ಣ ಅಪಘಾತಕ್ಕೆ ಒಳಗಾಗಿದೆ. ಮೂಲಗಳ ಮಾಹಿತಿಯಂತೆ, ಸಚಿವರ ಕಾರು ಟ್ರಕ್ಗೆ ಡಿಕ್ಕಿ ಹೊಡೆದಿದೆ. ಕಾರಿಗೆ ಹಾನಿಯಾಗಿದೆ. ಆದರೆ, ಸಚಿವರಿಗೆ ಯಾವುದೇ ತೊಂದರೆಯಾಗಿಲ್ಲ ಹಾಗೂ ಅವರೊಂದಿಗೆ ಪ್ರಯಾಣಿಸುತ್ತಿದ್ದ ಇತರರಿಗೂ ಏನು ಸಮಸ್ಯೆಯಾಗಿಲ್ಲ. ಸಚಿವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಸಿಬ್ಬಂದಿ ಟ್ರಕ್‌ನಿಂದ ಸಚಿವರ ಎಸ್‌ಯುವಿ ಕಾರು ಅಪಘಾತವಾಗಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ:ಅರಣ್ಯದಲ್ಲಿ ಇಬ್ಬರು ನಕ್ಸಲ್ ನಾಯಕರ ಸೆರೆ: ಟಿಫಿನ್ ಬಾಂಬ್ ಸೇರಿ ಸ್ಫೋಟಕಗಳ ಜಪ್ತಿ
ಘಟನೆ ಬಗ್ಗೆ ವಿವರ ನೀಡಿದ ರಾಂಬನ್ ಪೊಲೀಸರು:ಇಂದು ಜಮ್ಮುವಿನಿಂದ ಶ್ರೀನಗರಕ್ಕೆ ರಸ್ತೆಯಲ್ಲಿ ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ಕಿರಣ್ ರಿಜಿಜು ಅವರ ಕಾರು ಸಣ್ಣ ಅಪಘಾತಕ್ಕೆ ಒಳಗಾಗಿದೆ. ಯಾರಿಗೂ ಗಾಯಗಳಾಗಿಲ್ಲ ಮತ್ತು ಗೌರವಾನ್ವಿತ ಸಚಿವರು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಲಾಯಿತು ಎಂದು ಪೊಲೀಸರು ತಿಳಿಸಿದರು.
ಇದನ್ನೂ ಓದಿ:ಬಿಹಾರ ಸಚಿವ ತೇಜ್ ಪ್ರತಾಪ್ ಆಪ್ತರ ಬ್ಯಾಗ್ಗಳ ಹೊರ ಹಾಕಿದ ಹೋಟೆಲ್ ಸಿಬ್ಬಂದಿ: ಆರೋಪ