ಮುಂಬೈ: ಬಿಜೆಪಿ ಸಂಸದೆ ಮತ್ತು ಹಿರಿಯ ನಟಿ ಕಿರಣ್ ಕೇರ್ ತಮ್ಮ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯ(ಎಂಪಿಎಲ್‌ಡಿಎಸ್) ಒಂದು ಕೋಟಿ ರೂಪಾಯಿಯನ್ನು ಚಂಡೀಗಢದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರಕ್ಕೆ ವೆಂಟೀಲೇಟರ್ಗಳ ಖರೀದಿಗೆ ಮೀಸಲಿಡುವುದಾಗಿ ಘೋಷಿಸಿದ್ದಾರೆ.
ನನ್ನ ಹೃದಯದ ಭರವಸೆ ಮತ್ತು ಪ್ರಾರ್ಥನೆಯೊಂದಿಗೆ ಕೋವಿಡ್ ರೋಗಿಗಳಿಗೆ ತಕ್ಷಣವೇ ನೆರವಾಗಲು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಚಂಡೀಗಢದ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರಕ್ಕೆ ಒಂದು ಕೋಟಿ ರೂಪಾಯಿಯನ್ನು ದೇಣಿಗೆಯಾಗಿ ನೀಡುತ್ತಿದ್ದೇನೆ ಎಂದು ಕಿರಣ್ ಖೇರ್ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಈ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಕೆಲವು ಮಂದಿ ಕಿರಣ್ ಖೇರ್ ದೇಣಿಗೆ ಎಂಬ ಪದ ಬಳಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಕೆ ತಮ್ಮ ಜೇಬಿನಿಂದ ಹಣವನ್ನು ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.