ಬೆಳಗಾವಿ:ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟಿಕೆ ಹಿನ್ನೆಲೆ ಕರ್ನಾಟಕ- ಮಹಾರಾಷ್ಟ್ರ ಮಧ್ಯೆ ಬಸ್‌ಗಳ ಸಂಚಾರ ಸ್ಥಗಿತಗೊಂಡಿವೆ.
ಶಿವಸೇನೆ ಪುಂಡಾಟ; ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಸ್ಥಗಿತ - ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಸ್ಥಗಿತ
ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಗಲಾಟೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ- ಮಹಾರಾಷ್ಟ್ರ ಮಧ್ಯೆ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಬಸ್ ಸಂಚಾರ ಸ್ಥಗಿತ
ಬೆಳಗಾವಿ ಮಾರ್ಗವಾಗಿ ನಿತ್ಯ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ 300ಕ್ಕೂ ಹೆಚ್ಚು ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ 58 ಬಸ್‌ಗಳ ಸಂಚಾರವನ್ನು ಮಹಾರಾಷ್ಟ್ರ ಸರ್ಕಾರ ಸ್ಥಗಿತಗೊಳಿಸಿದೆ. ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕರ್ನಾಟಕದ ಬಸ್ಗಳನ್ನು ಬೆಳಗಾವಿ ಬಸ್ ಡಿಪೋಗೆ ಕಳಿಸಲಾಗುತ್ತಿದೆ. ಗಡಿ ಭಾಗದವರೆಗೆ ಮಾತ್ರ ಕರ್ನಾಟಕ ಸಾರಿಗೆ ಬಸ್‌ಗಳ ಸಂಚಾರ ವ್ಯವಸ್ಥೆ ಇದೆ.
ನಿನ್ನೆ ಕೊಲ್ಹಾಪುರ ಬಸ್ ನಿಲ್ದಾಣಕ್ಕೆ ನುಗ್ಗಿ ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದರು. ಕರ್ನಾಟಕ ಬಸ್‌ಗಳ ಮೇಲೆ ಮರಾಠಿ ಬರಹ ಬರೆದು ಉದ್ಧಟತನ ಮೆರೆದಿದ್ದರು.
Last Updated : Mar 13, 2021, 10:32 AM IST