ಎರ್ನಾಕುಲಂ:ಪಿಎಫ್ಐ ಕಚೇರಿಗಳ ಮೇಲೆ ಗುರುವಾರ ಎನ್ಐಎ ನಡೆಸಿರುವ ದಾಳಿಯನ್ನು ಖಂಡಿಸಿ ಕೇರಳದಲ್ಲಿ ಕಾರ್ಯಕರ್ತರು ಹರತಾಳ (ಪ್ರತಿಭಟನೆ) ನಡೆಸುತ್ತಿದ್ದಾರೆ. ಅಲ್ಲದೇ ಬಸ್ಗಳ ಮೇಲೆ ಪಿಎಫ್ಐ ಕಾರ್ಯಕರ್ತರು ಕಲ್ಲು ತೂರಾಟ ನಡೆಸುತ್ತಿದ್ದಾರೆ. ಇದರಿಂದ ತಪ್ಪಿಸಿಕೊಳ್ಳಲು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನೊಬ್ಬ ಹೆಲ್ಮೆಟ್ ಧರಿಸಿ ಬಸ್ ಚಲಾಯಿಸುತ್ತಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಹರತಾಳ ಹೆಸರಿನಲ್ಲಿ ವ್ಯಾಪಕ ಹಿಂಸಾಚಾರದಲ್ಲಿ ತೊಡಗಿದ್ದಾರೆ. ಅಲ್ಲದೇ ಅವರು ನಡೆಸಿದ ಕಲ್ಲು ತೂರಾಟದಲ್ಲಿ ಅನೇಕ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಹಾನಿಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ, ಪ್ರಾಣವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಲು ಮುಂದಾದ ಚಾಲಕನಿಗೆ ಹಲವರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಪತ್ತನಂತಿಟ್ಟದಲ್ಲೂ ಇಂತಹದ್ದೇ ಘಟನೆ ವರದಿಯಾಗಿದೆ.