ಕುಲ್ಗಾಂ(ಜಮ್ಮು ಕಾಶ್ಮೀರ):ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ. ಈ ವೇಳೆ ಇಬ್ಬರು ಭಯೋತ್ಪಾದಕರನ್ನು ಜಮ್ಮು ಕಾಶ್ಮೀರದ ಕುಲ್ಗಾಂ ಪ್ರದೇಶದಲ್ಲಿ ಹೊಡೆದುರುಳಿಸಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ರೆದ್ವಾನಿ ಬಾಲಾ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ನಿಖರವಾದ ಮಾಹಿತಿಯನ್ನು ಆಧರಿಸಿ, ಯೋಧರು ಆ ಪ್ರದೇಶವನ್ನು ಸುತ್ತುವರೆದಿದ್ದರು. ಈ ವೇಳೆ ಎರಡೂ ಕಡೆಯಿಂದ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಉಗ್ರಗಾಮಿಗಳನ್ನು ಹೊಡೆದುರುಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.