ಜಮ್ಮು-ಕಾಶ್ಮೀರ :ಕಣಿವೆಯಲ್ಲಿ ನಡೆಯುತ್ತಿರುವ ಉಗ್ರರ ದಮನ ಕಾರ್ಯಾಚರಣೆ ಮುಂದುವರೆದಿದೆ. ಇಂದು ಮತ್ತಿಬ್ಬರು ಉಗ್ರರನ್ನ ಸೇನಾ ಪಡೆಗಳು ಹೊಡೆದುರುಳಿಸಿವೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಟ್ರುಬ್ಜಿ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಯೋಧರು ಹೊಡೆದುರುಳಿಸಿದ್ದಾರೆ.
ಕುಲ್ಗಾಮ್ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನೆ - ಜಮ್ಮು ಕಾಶ್ಮೀರದಲ್ಲಿ ಉಗ್ರ ದಮನ ಕಾರ್ಯಾಚರಣೆ
ಜಮ್ಮು-ಕಾಶ್ಮೀರದ ಕುಲ್ಗಾಮ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಆಹುತಿ ಪಡೆದಿವೆ.
ಕುಲ್ಗಾಮ್ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನೆ
ಕುಲ್ಗಾಮ್‌ನ ಟ್ರುಬ್ಜಿ ಪ್ರದೇಶದ ನೌಪೋರಾ-ಖೇರ್ಪೋರಾದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಸೇನಾಪಡೆಗಳು ಕಾರ್ಯಾಚರಣೆಗೆ ಮುಂದಾದಾಗ, ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಪ್ರತಿದಾಳಿಯಲ್ಲಿ ಉಗ್ರರನ್ನು ಯೋಧರು ಹೊಸಕಿ ಹಾಕಿದ್ದಾರೆ. ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಓದಿ :ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ವಾಹನಗಳನ್ನು ಎಲ್ಲೆಂದರಲ್ಲಿ ತಡೆದು ನಿಲ್ಲಿಸದಿರಿ.. ಪ್ರವೀಣ್ ಸೂದ್ ಸೂಚನೆ