ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಇಲ್ಲಿನ ಕುಲ್ಗಾಮ್ ಪ್ರಾಂತ್ಯದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಭದ್ರತಾ ಪಡೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೋರ್ವನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಯಾರಿಪೋರಾ ಪ್ರದೇಶದ ಮುನಂದ್ ಗ್ರಾಮದಲ್ಲಿ ನಡೆದ ಭದ್ರತಾ ಪಡೆ ಹಾಗೂ ಉಗ್ರರ ನಡುವಿನ ಗುಂಡಿನ ದಾಳಿಯಲ್ಲಿ ಓರ್ವ ಅಪರಿಚಿತ ಉಗ್ರನನ್ನು ಬಲಿಪಡೆಯಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ವಕ್ತಾರ ತಿಳಿಸಿದ್ದಾರೆ.