ನವದೆಹಲಿ:ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಭಾನುವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಶರಣಾದರು. ಸುಪ್ರೀಂ ಕೋರ್ಟ್ ಏಪ್ರಿಲ್ 18ರಂದು ಆಶಿಶ್ ಮಿಶ್ರಾಗೆ ನೀಡಿದ್ದ ಜಾಮೀನು ರದ್ದುಗೊಳಿಸಿ, ಒಂದು ವಾರದೊಳಗೆ ಶರಣಾಗುವಂತೆ ಸೂಚಿಸಿತ್ತು. ಅದರಂತೆ ಒಂದು ದಿನ ಮುಂಚಿತವಾಗಿಯೇ ನ್ಯಾಯಾಧೀಶರ ಮುಂದೆ ಶರಣಾಗಿದ್ದಾರೆ.
ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಆಶಿಶ್ ಮಿಶ್ರಾರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ಸಂತ್ರಸ್ತ ರೈತ ಕುಟುಂಬಗಳು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 4ರಂದು ವಿಚಾರಣೆ ನಡೆಸಿದ ಕೋರ್ಟ್, ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿ, ಒಂದು ವಾರದೊಳಗೆ ಶರಣಾಗುವಂತೆ ಆದೇಶಿಸಿತ್ತು.