ನವದೆಹಲಿ :ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ(Lakhimpur Kheri violence) ರೈತರ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟ ಪ್ರಕರಣದ ವಿಚಾರಣೆಯನ್ನು ಯುಪಿ ಸರ್ಕಾರದ (Uttar Pradesh government) ಕೋರಿಕೆಯ ಮೇರೆಗೆ ಸುಪ್ರೀಂಕೋರ್ಟ್(Supreme Court) ನವೆಂಬರ್ 15ಕ್ಕೆ ಮುಂದೂಡಿದೆ.
ಲಖೀಂಪುರ ಖೇರಿ ಹಿಂಸಾಚಾರ.. ನ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.. - ಸುಪ್ರೀಂಕೋರ್ಟ್
ಲಖೀಂಪುರ ಖೇರಿಯಲ್ಲಿ(Lakhimpur Kheri violence) ರೈತರ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟ ಪ್ರಕರಣದ ವಿಚಾರಣೆಯನ್ನು ಯುಪಿ ಸರ್ಕಾರದ (Uttar Pradesh government) ಕೋರಿಕೆಯ ಮೇರೆಗೆ ಸುಪ್ರೀಂಕೋರ್ಟ್(Supreme Court) ನವೆಂಬರ್ 15ಕ್ಕೆ ಮುಂದೂಡಿದೆ..
![ಲಖೀಂಪುರ ಖೇರಿ ಹಿಂಸಾಚಾರ.. ನ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.. sc adjourns hearing](https://etvbharatimages.akamaized.net/etvbharat/prod-images/768-512-13611851-thumbnail-3x2-court1.jpg)
ಸುಪ್ರೀಂಕೋರ್ಟ್
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಮೇಲುಸ್ತುವಾರಿ ವಹಿಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯನ್ನು ನೇಮಿಸಲು ಆದೇಶಿಸಿತ್ತು. ಬಳಿಕ ಉತ್ತರ ಪ್ರದೇಶ ಸರ್ಕಾರ ಅಲಹಾಬಾದ್ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪ್ರದೀಪ್ ಕುಮಾರ್ ಶ್ರೀವಾಸ್ತವ್ ಅವರನ್ನು ಏಕಸದಸ್ಯ ತನಿಖಾ ಆಯೋಗದ ಮುಖ್ಯಸ್ಥರನ್ನಾಗಿ ನೇಮಿಸಿತ್ತು. ಅಲ್ಲದೇ, 2 ತಿಂಗಳಲ್ಲಿ ತನಿಖಾ ವರದಿಯನ್ನು ಸಲ್ಲಿಸಲು ಗಡುವು ನೀಡಿತ್ತು.
ಹೀಗಾಗಿ, ಪ್ರಕರಣದ ತನಿಖೆಯು ಪ್ರಗತಿಯಲ್ಲಿರುವುದರಿಂದ ಕೋರ್ಟ್ ವಿಚಾರಣೆಯನ್ನು ಮುಂದೂಡುವಂತೆ ಸರ್ಕಾರ ಮಾಡಿದ ಮನವಿ ಆಧಾರದ ಮೇಲೆ ಸುಪ್ರೀಂಕೋರ್ಟ್ ನ.15ಕ್ಕೆ ವಿಚಾರಣೆ ಮುಂದೂಡಿದೆ.