ಲಖನೌ(ಉತ್ತರ ಪ್ರದೇಶ): ಲಖಿಂಪುರ ಹಿಂಸಾಚಾರದ ಪ್ರಮುಖ ಆರೋಪಿ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಇಂದು ಉತ್ತರ ಪ್ರದೇಶ ಪೊಲೀಸರ ಮುಂದೆ ಹಾಜರಾಗಿದ್ದಾನೆ.
ಅಕ್ಟೋಬರ್ 8ರಂದು ಆಶಿಶ್ ಮಿಶ್ರಾ ಕೋರ್ಟ್ಗೆ ಹಾಜರಾಗಲು ನೋಟಿಸ್ ನೀಡಲಾಗಿತ್ತು. ಆದರೆ ಕೋರ್ಟ್ಗೆ ಹಾಜರಾಗದ ಹಿನ್ನೆಲೆಯಲ್ಲಿ ಇಂದು ಪೊಲೀಸರ ಮುಂದೆ ಆಶಿಶ್ ಹಾಜರಾಗಿದ್ದಾನೆ. ಪೊಲೀಸರು ಆತನನ್ನು ಕೋರ್ಟ್ಗೆ ಕರೆದೊಯ್ಯುವ ಸಾಧ್ಯತೆಯಿದೆ.