ಕರ್ನಾಟಕ

karnataka

ETV Bharat / bharat

ಗುಜರಾತ್ ಸಿಎಂ ಭೇಟಿ ಮಾಡಿದ ಲಕ್ಷ್ಮಿ ಮಿತ್ತಲ್: ರಾಜ್ಯದಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆಗೆ ನಿರ್ಧಾರ - ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ

ಉದ್ಯಮಿ ಲಕ್ಷ್ಮಿ ಮಿತ್ತಲ್​​, ಗುಜರಾತ್​ ಸಿಎಂ ವಿಜಯ್​ ರೂಪಾನಿ ಭೇಟಿ ಮಾಡಿ ರಾಜ್ಯದಲ್ಲಿ ಒಂದು ಲಕ್ಷ ಕೋಟಿ ರೂ. ಹೂಡಿಕೆ ಮಾಡುವುದಾಗಿ ತಿಳಿಸಿದ್ದಾರೆ.

Lakshmi Mittal meets Gujarat CM
Lakshmi Mittal meets Gujarat CM

By

Published : Aug 21, 2021, 2:56 PM IST

ಗಾಂಧಿನಗರ (ಗುಜರಾತ್):ಆರ್ಸೆಲರ್ ಮಿತ್ತಲ್ ಸಮೂಹದ ಅಧ್ಯಕ್ಷ ಲಕ್ಷ್ಮಿ ಮಿತ್ತಲ್ ಮತ್ತು ಸಿಇಒ ದಿಲೀಪ್ ಉಮಾ ಅವರು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿಯನ್ನು ಭೇಟಿ ಮಾಡಿದ್ದಾರೆ. ಈ ವೇಳೆ ತಮ್ಮ ಹಜೀರಾ ಮೂಲದ ಸ್ಥಾವರ ವಿಸ್ತರಣೆಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಶುಕ್ರವಾರ ನಡೆದ ಸಭೆಯಲ್ಲಿ, ಮಿತ್ತಲ್ ಅವರು ಸೂರತ್‌ನ ಹಜೀರಾದಲ್ಲಿರುವ ಪ್ಲಾಂಟ್ ವಿಸ್ತರಣೆಗೆ ಹೆಚ್ಚುವರಿಯಾಗಿ 50,000 ಕೋಟಿ ರೂಪಾಯಿ ಹೂಡಿಕೆ ಮಾಡಲು ಯೋಜಿಸಿದ್ದೇವೆ ಎಂಬ ಮಾಹಿತಿಯನ್ನು ಸಿಎಂ ರೂಪಾನಿ ಗಮನಕ್ಕೆ ತಂದಿದ್ದಾರೆ. ಅಲ್ಲದೇ, ಮುಂದಿನ ದಿನಗಳಲ್ಲಿ ಗುಜರಾತ್​ನಲ್ಲಿ ಒಟ್ಟು 1 ಲಕ್ಷ ಕೋಟಿ ಹೂಡಿಕೆ ಮಾಡಲು ಉತ್ಸುಕರಾಗಿದ್ದೇವೆ, ಇದಕ್ಕೆ ನಿಮ್ಮ ಸಹಕಾರ ಬೇಕು ಎಂದಿದ್ದಾರೆ.

ಇದನ್ನೂ ಓದಿ: ರಿಲಯನ್ಸ್ ಸೇರಿ ಜಾಗತಿಕ ಶ್ರೇಯಾಂಕದಲ್ಲಿ ಕುಸಿದ ಭಾರತೀಯ ಕಂಪನಿಗಳು.. ಅತ್ಯಂತ ಶ್ರೀಮಂತ ಸಂಸ್ಥೆ ಯಾವುದು ಗೊತ್ತಾ?

ಮಿತ್ತಲ್​ ಅವರ ಈ ನಿರ್ಧಾರವನ್ನು ಸ್ವಾಗತಿಸಿರುವ ಸಿಎಂ ರೂಪಾನಿ, ರಾಜ್ಯ ಸರ್ಕಾರದಿಂದ ಅಗತ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದ್ದಾರೆ.

ABOUT THE AUTHOR

...view details