ಪಾಟ್ನಾ (ಬಿಹಾರ): ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಅವರಿಗೆ ಪಾಸ್ಪೋರ್ಟ್ ನವೀಕರಣ ಮಾಡಲು ವಿಶೇಷ ಸಿಬಿಐ ನ್ಯಾಯಾಲಯ ಅನುಮತಿಸಿದೆ. ಹೀಗಾಗಿ ಅವರು ಶೀಘ್ರವೇ ತಮ್ಮ ಕಿಡ್ನಿ ಕಸಿಗಾಗಿ ಸಿಂಗಾಪುರಕ್ಕೆ ತೆರಳಲಿದ್ಧಾರೆ ಎಂದು ವರದಿಯಾಗಿದೆ.
ಬಹುಕೋಟಿ ಮೇವು ಹಗರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಕಿಡ್ನಿ, ಶ್ವಾಸಕೋಶ ಸಮಸ್ಯೆ, ಸಕ್ಕರೆ ಕಾಯಿಲೆ, ರಕ್ತದೊತ್ತಡ ಸೇರಿ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ಧಾರೆ. ಸದ್ಯ ಅವರ ಎರಡೂ ಕಿಡ್ನಿಗಳಿಗೂ ಶೇ.75ಕ್ಕಿಂತ ಹೆಚ್ಚು ಹಾನಿಯಾಗಿವೆ. ಕಳೆದ ಒಂದು ವರ್ಷದಿಂದ ಸಿಂಗಾಪುರದ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ಧಾರೆ.