ಪಾಟ್ನಾ(ಬಿಹಾರ):ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೋಸ್ಕರ ಪಾಟ್ನಾದಿಂದ ದೆಹಲಿಯ ಏಮ್ಸ್ಗೆ ಏರ್ಲಿಫ್ಟ್ ಮಾಡಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಮೆಟ್ಟಿಲಿನಿಂದ ಕೆಳಗೆ ಬಿದ್ದಿರುವ ಲಾಲೂ ಪ್ರಸಾದ್ ಯಾದವ್ ಸದ್ಯ ಪಾಟ್ನಾದ ಪಾರಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದರೆ, ಇದೀಗ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಕಂಡು ಬಂದಿರುವ ಕಾರಣ ಏಮ್ಸ್ಗೆ ಸ್ಥಳಾಂತರ ಮಾಡಲಾಗಿದೆ.
ಇದನ್ನೂ ಓದಿರಿ:ಬೂಸ್ಟರ್ ಡೋಸ್ ಪಡೆದುಕೊಳ್ಳುವ ಅಂತರದಲ್ಲಿ 9 ರಿಂದ 6 ತಿಂಗಳಿಗೆ ಇಳಿಕೆ.. ಕೇಂದ್ರದ ನಿರ್ಧಾರ
ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ಕಳೆದ ಭಾನುವಾರ ಲಾಲೂ ಪ್ರಸಾದ್ ಯಾದವ್ ಮನೆಗೆ ತೆರಳಿದ್ದರು. ಆದರೆ, ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ ಸೋಮವಾರ ಬೆಳಗ್ಗೆ ಪಾರಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ಆರೋಗ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮೂಲಕ ವಿಚಾರಿಸಿದ್ದಾರೆ. ಇನ್ನೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.