ನವದೆಹಲಿ :ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅವರೇ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಪಕ್ಷದ ಮುಖ್ಯಸ್ಥರಾಗಿ ಮುಂದುವರೆಯಲಿದ್ದಾರೆ ಎಂದು ಬಿಹಾರ ಆರ್‌ಜೆಡಿ ರಾಜ್ಯಾಧ್ಯಕ್ಷ ಜಗದಾನಂದ್ ಸಿಂಗ್ ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಈಟಿವಿ ಭಾರತದೊಂದಿಗೆ ಮಾತನಾಡಿದ ಜಗದಾನಂದ್ ಸಿಂಗ್ ಅವರು, ಇತ್ತೀಚೆಗೆ ಲಾಲೂ ಪ್ರಸಾದ್ ಯಾದವ್ ಅವರನ್ನು ಭೇಟಿಯಾಗಿದ್ದೇನೆ. ಪ್ರಸ್ತುತ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಯಾದವ್ ಅವರ ಆರೋಗ್ಯ ಉತ್ತಮವಾಗಿದೆ ಮತ್ತು ಶೀಘ್ರದಲ್ಲೇ ಅವರು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ ಎಂದಿದ್ದಾರೆ.
ಬಿಹಾರಕ್ಕೆ ಭೇಟಿ ನೀಡಲಿರುವ ಲಾಲೂ ಅವರು ಪಕ್ಷದ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುತ್ತಾರೆ. ಒಂದು ಬಾರಿ ಅವರ ಆರೋಗ್ಯ ಚೇತರಿಕೆಯಾದರೆ, ತಮ್ಮ ಬಹುಪಾಲು ಸಮಯವನ್ನು ಬಿಹಾರದ ಜನತೆಯೊಂದಿಗೆ ಕಳೆಯುತ್ತಾರೆ ಎಂದು ಜಗದಾನಂದ್ ಸಿಂಗ್ ಹೇಳಿದ್ದಾರೆ.