ನವದೆಹಲಿ: ದುಮ್ಕಾ ಖಜಾನೆ ಪ್ರಕರಣದಲ್ಲಿ ಜೈಲು ಸೇರಿರುವ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್ ಮುಂದೂಡಿದೆ.
ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಾಧೀಶ ಅಪ್ರೇಶ್ ಕುಮಾರ್, ಡಿಸೆಂಬರ್ 11ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿ ಆದೇಶಿಸಿದ್ದಾರೆ. ಜಾರ್ಖಂಡ್‌ನಲ್ಲಿ ಮೇವು ಹಗರಣದ ಆರೋಪದಲ್ಲಿ ಜೈಲು ಸೇರಿರುವ ಆರ್‌ಜೆಡಿ ವರಿಷ್ಠ ಲಾಲು ಮೇಲೆ ಒಟ್ಟು 5 ಪ್ರಕರಣಗಳಿವೆ. ಇವುಗಳಲ್ಲಿ ಕೊನೆಯ ಪ್ರಕರಣ ದುಮ್ಕಾ ಖಜಾನೆಯದ್ದಾಗಿದೆ.