ಮುಂಬೈ, ಮಹಾರಾಷ್ಟ್ರ:ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ ಎಂದು ಚಿಕಿತ್ಸೆ ನೀಡುತ್ತಿದ್ದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಲತಾ ಮಂಗೇಶ್ಕರ್ ನಿಧನ: ಆಸ್ಪತ್ರೆ ವೈದ್ಯರ ಮಾಹಿತಿ - ಬಹು ಅಂಗಾಂಗ ವೈಫಲ್ಯದಿಂದ ಲತಾ ಮಂಗೇಶ್ಕರ್ ಮೃತ
ಬಹು ಅಂಗಾಂಗ ವೈಫಲ್ಯದಿಂದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ವಿಧಿವಶರಾಗಿದ್ದಾರೆ ಎಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಲತಾ ಮಂಗೇಶ್ಕರ್ ನಿಧನ: ಆಸ್ಪತ್ರೆ ವೈದ್ಯರ ಮಾಹಿತಿ
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಡಾ.ಪ್ರತೀತ್ ಸಮ್ದಾನಿ ಅವರು ಅಧಿಕೃತ ಹೇಳಿಕೆ ಪ್ರಕಟಿಸಿದ್ದು, ಕೋವಿಡ್ನಿಂದ ಆಸ್ಪತ್ರೆಗೆ ದಾಖಲಾದ ಸುಮಾರು 28 ದಿನಗಳ ನಂತರ ಲತಾ ಮಂಗೇಶ್ಕರ್ ಅವರು ನಿಧನರಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಲತಾ ಮಂಗೇಶ್ಕರ್ ಅವರನ್ನು ಜನವರಿಯಲ್ಲಿ ನ್ಯುಮೋನಿಯಾ ಮತ್ತು ಕೊರೊನಾವೈರಸ್ ಸೋಂಕಿನ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Last Updated : Feb 6, 2022, 12:11 PM IST