ಮುಂಬೈ, ಮಹಾರಾಷ್ಟ್ರ:ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಿಸದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಲತಾ ಮಂಗೇಶ್ಕರ್ ಅವರಿಗೆ 92 ವರ್ಷವಾಗಿತ್ತು.
ಮೌನವಾಯ್ತು ಹಾಡುಹಕ್ಕಿ: ಗಾನಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ..! - Lata Mangeshkar passes away'
ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಿಸದೆ ಇಂದು ಇಹಲೋಕ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜನವರಿ 9ರಂದು ಕೋವಿಡ್ ದೃಢಪಟ್ಟ ಹಿನ್ನೆಲೆ ಲತಾ ಮಂಗೇಶ್ಕರ್ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋವಿಡ್ ಸೋಂಕು ಮತ್ತು ನ್ಯುಮೋನಿಯಾದಿಂದ ಸಂಪೂರ್ಣವಾಗಿ ಚೇತರಿಸಿಕೊಂಡ ಕಾರಣ ಹಾಗೂ ಅವರ ಆರೋಗ್ಯ ಸುಧಾರಿಸಿದ ಹಿನ್ನೆಲೆಯಲ್ಲಿ ಕಳೆದ ವಾರ ಅವರಿಗೆ ಅಳವಡಿಸಿದ್ದ ವೆಂಟಿಲೇಟರ್ ಅನ್ನು ತೆಗೆದುಹಾಕಲಾಗಿತ್ತು.
ಆದರೆ ನಿನ್ನೆಯಿಂದ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಪುನಃ ಅವರನ್ನು ವೆಂಟಿಲೇಟರ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಹಾಡುಹಕ್ಕಿ ಕೊನೆಯುಸಿರೆಳೆದಿದ್ದು, ಭಾರತೀಯ ಚಿತ್ರರಂಗ ಸೇರಿದಂತೆ ಇಡೀ ದೇಶವೇ ಶೋಕಸಾಗರದಲ್ಲಿ ಮುಳುಗಿದೆ.