ನವದೆಹಲಿ: ಬಾಲಿವುಡ್ ನೈಟಿಂಗೇಲ್ ಲತಾ ಮಂಗೇಶ್ಕರ್ ಇಂದು ಇಹಲೋಕ ತ್ಯಜಿಸಿದ್ದಾರೆ. ಇವರ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.
ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಲತಾಜೀ ಅವರು ನಿಧನರಾದರು ಎಂಬ ನೋವಿನ ಸುದ್ದಿ ಕೇಳಿದೆ. ಹಲವು ದಶಕಗಳಿಂದ ಅವರು ಭಾರತದ ಅತ್ಯಂತ ಪ್ರೀತಿಯ ಧ್ವನಿಯಾಗಿಯಾಗಿದ್ದರು. ಲತಾ ಮಂಗೇಶ್ಕರ್ ಅವರ ಬಂಗಾರದಂಥ ಧ್ವನಿ ಸದಾ ಅಮರ. ಅವರು ಅಭಿಮಾನಿಗಳ ಹೃದಯದಲ್ಲಿ ಯಾವಾಗಲೂ ಪ್ರತಿಧ್ವನಿಸುತ್ತಿರುತ್ತಾರೆ. ಲತಾ ಮಂಗೇಶ್ಕರ್ ಅವರ ಕುಟುಂಬಕ್ಕೆ, ಸ್ನೇಹಿತರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಸಂತಾಪ ಸೂಚಿಸಿದ್ದಾರೆ.