ಪಣಜಿ (ಗೋವಾ):ಮುಂದಿನ ವರ್ಷ ಫೆಬ್ರವರಿಯಲ್ಲಿ ಗೋವಾದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ ವಿರುದ್ಧ ಬಿರುಸಿನ ಪ್ರಚಾರ ಕೈಗೊಳ್ಳುವಂತೆ ಪಕ್ಷದ ನಾಯಕರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
ಬಿರುಸಿನ ಪ್ರಚಾರ ಕೈಗೊಂಡು ಬಿಜೆಪಿ ಪಕ್ಷದ ಸೋಲನ್ನು ಖಚಿತಪಡಿಸಿಕೊಳ್ಳುವಂತೆ ದೆಹಲಿಯಲ್ಲಿ ನಡೆದ ಪಕ್ಷದ ನಾಯಕರ ಸಭೆಯಲ್ಲಿ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎಂದು ಕಾಂಗ್ರೆಸ್ನ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್, ಜಿಪಿಸಿಸಿ ಅಧ್ಯಕ್ಷ ಗಿರೀಶ್ ಚೋಡಂಕರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ದಿಗಂಬರ್ ಕಾಮತ್ ಭಾಗವಹಿಸಿದ್ದರು.