ಪಣಜಿ: ಗೋವಾ ವಿಧಾನಸಭೆಯ ಎಲ್ಲಾ 40 ಸ್ಥಾನಗಳ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಬಹಿರಂಗವಾಗಲಿದೆ. ಸದ್ಯದ ಮಟ್ಟಿಗೆ ಇದೊಂದು ಜಿದ್ದಾಜಿದ್ದಿನ ಕಾಳಗದಂತೆ ಕಾಣುತ್ತಿದ್ದು, ಗೋವಾದ ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಮುನ್ನಡೆ ಸಾಧಿಸಿದ್ದಾರೆ.
ಬೆಳಗ್ಗೆ 8 ಗಂಟೆಯಿಂದಲೇ ಆರಂಭವಾದ ಮತ ಎಣಿಕೆಯಲ್ಲಿ ಬಿಜೆಪಿ 18 ಹಾಗೂ ಕಾಂಗ್ರೆಸ್ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಾಂಡ್ರೆಮ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಲಕ್ಷ್ಮೀಕಾಂತ್ ಪರ್ಸೇಕರ್, ನಾನು ಕಾಂಗ್ರೆಸ್ ಮತ್ತು ಬಿಜೆಪಿಯೊಂದಿಗೆ ಇರುವುದಿಲ್ಲ. ಅವರು ನನಗೆ ಮೋಸ ಮಾಡಿದ್ದಾರೆ. ಹಾಗಾಗಿ, ಎರಡೂ ಪಕ್ಷಗಳಿಂದ ದೂರವಿದ್ದೇನೆ ಎಂದು ಹೇಳಿದ್ದಾರೆ.
GOA (40/40) | |||||
---|---|---|---|---|---|
BJP | INC+ | TMC+ | AAP | OTH | |
18 | 13 | 5 | 1 | 3 |