ನಾಗ್ಪುರ( ಮಹಾರಾಷ್ಟ್ರ):ಇಲ್ಲಿನ ಮಹಾರಾಜಬಾಗ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಈ ನಗರದಲ್ಲಿ ಚಿರತೆ ಪ್ರತ್ಯಕ್ಷ: ಭೀತಿಯಲ್ಲಿ ಜನತೆ
ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಮಹಾರಾಜಬಾಗ್ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಕ್ರಮ ಕೈಗೊಂಡಿದ್ದಾರೆ.
Leopard scare in Nagpur
ಅರಣ್ಯ ಅಧಿಕಾರಿಗಳು ಚಿರತೆ ಸೆರೆಗಾಗಿ ಬೋನ್ ಇರಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಇನ್ನು ಈ ಚಿರತೆ ನಾಗ್ಪುರದ ಗಾಯತ್ರಿ ನಗರ ಎನ್‌ಟಿಪಿಐ ವಸತಿ ಪ್ರದೇಶದಲ್ಲಿ ಕಂಡು ಬಂದಿತ್ತು. ಈ ಬಳಿಕ ಮಹಾರಾಜ್‌ಬಾಗ್ ಪ್ರದೇಶದ ಕಾಣಿಸಿಕೊಂಡಿದೆ. ಅಷ್ಟೇ ಅಲ್ಲದೆ, ಕೃಷಿ ಇಲಾಖೆಯ ಕಚೇರಿಯ ಬಳಿ ಚಿರತೆ ಬೇಟೆಯಾಡಿ ಹಂದಿಯನ್ನು ತಿಂದು ಹಾಕಿದೆ.
ಸದ್ಯ ಇಲಾಖೆ ಶೋಧ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದು, ಈ ಪ್ರದೇಶದಲ್ಲಿ ಬಲೆಗಳನ್ನು ಹಾಕಲಾಗಿದೆ ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.