ಸೊಪೋರ್(ಜಮ್ಮು-ಕಾಶ್ಮೀರ):ಕಣಿವೆ ನಾಡು ಜಮ್ಮು ಕಾಶ್ಮೀರದ ಸೊಪೋರ್ನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಯೋಧರು ಎಲ್ಇಟಿ ಉಗ್ರನ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸೊಪೋರ್-ಕುಪ್ವಾರ್ ರಸ್ತೆಯಲ್ಲಿ ಸಾಕಿಬ್ ಶಕೀಲ್ ದಾರ್ ಎಂಬ ಭಯೋತ್ಪಾದಕನನ್ನು ಬಂಧಿಸಲಾಗಿದ್ದು, ಆತನಿಂದ ಪಿಸ್ತೂಲ್, ಮ್ಯಾಗಜೀನ್ ಮತ್ತು 8 ಪಿಸ್ತೂಲ್ ಬುಲೆಟ್ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತ ವ್ಯಕ್ತಿಯನ್ನು ಎಲ್ಇಟಿಯ ಹೈಬ್ರಿಡ್ ಉಗ್ರನೆಂದು ಗುರುತಿಸಲಾಗಿದ್ದು, ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲು ಯೋಜನೆ ರೂಪಿಸುತ್ತಿದ್ದನೆಂದು ತಿಳಿದು ಬಂದಿದೆ. ನಿನ್ನೆ ತಡರಾತ್ರಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 9:40ರ ಸುಮಾರು ಚೆಕ್ ಬ್ರಾತ್ ರಸ್ತೆ ಬಳಿ ಬರುತ್ತಿದ್ದ ವ್ಯಕ್ತಿಯ ಚಲನವಲನದಲ್ಲಿ ಅನುಮಾನ ಮೂಡಿದ್ದು, ನಿಲ್ಲುವಂತೆ ಭದ್ರತಾ ಸಿಬ್ಬಂದಿ ಸೂಚಿಸಿದ್ದಾರೆ. ಆದರೆ, ಅಲ್ಲಿಂದ ಪರಾರಿಯಾಗಲು ಯತ್ನಿಸಿದಾಗ ಬಂಧಿಸುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಈತ ಕಳೆದ ಕೆಲ ದಿನಗಳಿಂದ ಚೆಕ್ ಬ್ರಾತ್ನಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ.