ನವದೆಹಲಿ:ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ ಕೋರಿದ್ದಾರೆ. ಲಿಂಗ ಸಮಾನತೆ ಉತ್ತೇಜಿಸಲು ಮತ್ತು ಅಸಮಾನತೆಯನ್ನು ತೊಡೆದುಹಾಕಲು ಎಲ್ಲಾ ಜನರು ಸಂಕಲ್ಪ ಕೈಗೊಳ್ಳಬೇಕು ಎಂದು ಕರೆ ನೀಡಿದರು.
"ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು, ಎಲ್ಲಾ ನಾಗರಿಕರಿಗೆ ಶುಭಾಶಯಗಳು. ನಮ್ಮ ದೇಶದ ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಹೊಸ ದಾಖಲೆ ಮತ್ತು ಸಾಧನೆಗಳನ್ನು ಮಾಡುತ್ತಿದ್ದಾರೆ. ಲಿಂಗ ನ್ಯಾಯವನ್ನು ಉತ್ತೇಜಿಸಲು ಮತ್ತು ಮಹಿಳೆಯರು ಮತ್ತು ಪುರುಷರ ನಡುವಿನ ಅಸಮಾನತೆಯನ್ನು ತೊಡೆದುಹಾಕಲು ನಾವು ಒಟ್ಟಾಗಿ ಸಂಕಲ್ಪ ಕೈಗೊಳ್ಳೋಣ " ಎಂದು ರಾಷ್ಟ್ರಪತಿಯವರು ಟ್ವೀಟ್ ಮಾಡಿದ್ದಾರೆ.