ಮುಂಬೈ:ಪಂಜಾಬ್ ಗಾಯಕ ಸಿಧು ಮೂಸೆ ವಾಲಾರ ಮೇಲೆ ಗುಂಡಿನ ದಾಳಿ ಮಾಡಿ ಹತ್ಯೆಗೈದ ಘಟನೆ ಮಾಸುವ ಮುನ್ನವೇ ಬಾಲಿವುಡ್ ನಟ ಸಲ್ಮಾನ್ ಖಾನ್ರನ್ನು ಕೊಲೆ ಮಾಡುವುದಾಗಿ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದೆ. ನಟ ಸಲ್ಮಾನ್ ಖಾನ್ ಅವರ ತಂದೆ ಭಾನುವಾರ ಬೆಳಗ್ಗೆ ಜಾಗಿಂಗ್ ಮುಗಿಸಿ ಬಂದಾಗ ಮನೆಯ ಟೇಬಲ್ ಮೇಲಿದ್ದ ಪತ್ರವನ್ನು ನೋಡಿದಾಗ ಈ ವಿಷಯ ಬೆಳಕಿಗೆ ಬಂದಿದೆ.
ಹತ್ಯೆ ಮಾಡುವುದಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪತ್ರ! - ಸಲ್ಮಾನ್ ಖಾನ್ಗೆ ಬೆದರಿಕೆ ಪತ್ರ
ಬಾಲಿವುಡ್ ನಟ ಸಲ್ಮಾನ್ ಖಾನ್ರನ್ನು ಹತ್ಯೆ ಮಾಡಲಾಗುವುದು ಎಂದು ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಪತ್ರವನ್ನು ನಟನ ಮನೆಗೇ ರವಾನಿಸಿದ್ದಾನೆ. ಈ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಲ್ಮಾನ್ ಖಾನ್ಗೆ ಬೆದರಿಕೆ ಪತ್ರ
ನಟ ಸಲ್ಮಾನ್ ಖಾನ್ರನ್ನು ಕೊಲೆ ಮಾಡಲಾಗುವುದು ಎಂದು ಆ ಪತ್ರದಲ್ಲಿ ಬರೆಯಲಾಗಿದೆ. ಈ ಬಗ್ಗೆ ಕುಟುಂಬಸ್ಥರು ಬಾಂದ್ರಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡ ಪೊಲೀಸರು ಬೆದರಿಕೆಯೊಡ್ಡಿದ ಅಪರಿಚಿತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಓದಿ:ನೆಚ್ಚಿನ ನಟ ಪವನ್ ಕಲ್ಯಾಣ್ ಭೇಟಿಗಾಗಿ ಅಭಿಮಾನಿಯಿಂದ 400 ಕಿ.ಮೀ ಪಾದಯಾತ್ರೆ